ADVERTISEMENT

4,000 ದಾಟಿದ ಕೋವಿಡ್‌ ಸೋಂಕಿತರು

ನಾಲ್ವರು ಸಾವು, 2,445 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 17:10 IST
Last Updated 30 ಜುಲೈ 2020, 17:10 IST

ಉಡುಪಿ: ಜಿಲ್ಲೆಯಲ್ಲಿ ಕೋವಿಡ್–19‌ ಸೋಂಕಿತರ ಸಂಖ್ಯೆ 4,000 ಗಡಿದಾಟಿದೆ. ಗುರುವಾರ 248 ಜನರಲ್ಲಿ ಸೋಂಕು ದೃಢಪಟ್ಟಿದೆ. ದಿನೇ ದಿನೇ ಸೋಂಕು ಹೆಚ್ಚಳವಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ನಾಲ್ವರ ಸಾವು

ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಐಎಲ್‌ಐ ರೋಗ ಲಕ್ಷಣಗಳಿದ್ದ 70 ಹಾಗೂ 80 ವರ್ಷದ ವೃದ್ಧೆ, ಸಾರಿ ಲಕ್ಷಣಗಳಿದ್ದ 63 ವರ್ಷದ ವೃದ್ಧೆ ಹಾಗೂ ಐಎಲ್‌ಐ ಲಕ್ಷಣಗಳಿದ್ದ 67 ವರ್ಷದ ವೃದ್ಧರಲ್ಲಿ ಸೋಂಕು ಪತ್ತೆಯಾಗಿತ್ತು. ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 29ಕ್ಕೇರಿಕೆಯಾಗಿದೆ.

ADVERTISEMENT

784 ಮಾದರಿ ರವಾನೆ

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಹಾಗೂ ಸಾರಿ, ಐಎಲ್‌ಐ ಲಕ್ಷಣಗಳಿದ್ದ 784 ಜನರ ಮಾದರಿ ಸಂಗ್ರಹಿಸಿ ಪ್ರಯೋಗಾಲಗಳಿಗೆ ಕಳುಹಿಸಲಾಗಿದೆ. 609 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 47 ಜನರನ್ನು ಐಸೊಲೇಷನ್‌ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ 61 ಸೇರಿ ಜಿಲ್ಲೆಯಲ್ಲಿ ಇದುವರೆಗೆ 2,445 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,669 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,143ಕ್ಕೇರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.