ADVERTISEMENT

ಉಡುಪಿ | ಕೋವಿಡ್‌: ನಾಲ್ವರು ಸಾವು, 219 ಪಾಸಿಟಿವ್ ‌

183 ಮಂದಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆಯಾದವರು 3,768

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 15:58 IST
Last Updated 11 ಆಗಸ್ಟ್ 2020, 15:58 IST
   

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ನಾಲ್ವರು ಕೋವಿಡ್–19‌ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 219 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಉಡುಪಿ ತಾಲ್ಲೂಕಿನ 115, ಕುಂದಾಪುರದ 68 ಹಾಗೂ ಕಾರ್ಕಳದ 33 ಜನರಿಗೆ ಸೋಂಕು ತಗುಲಿದ್ದು, ಪ್ರಾಥಮಿಕ ಸಂಪರ್ಕದಿಂದ 64, ಐಎಲ್‌ಐ ಲಕ್ಷಣಗಳಿದ್ದ 39, ಶೀತಜ್ವರದ ಲಕ್ಷಣಗಳಿದ್ದ ಇಬ್ಬರು, ಅಂತರ ಜಿಲ್ಲೆ ಸಂಚಾರದಿಂದ ಒಬ್ಬರಿಗೆ, ವಿದೇಶ ಪ್ರಯಾಣ ಮಾಡಿದ್ದ ಒಬ್ಬರಲ್ಲಿ ಕೋವಿಡ್‌ ಕಾಣಿಸಿಕೊಂಡಿದೆ. 112 ಜನರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

58 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ, 161 ಮಂದಿಯಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿದ್ದ 128 ಸೋಂಕಿತರಿಗೆ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಹಾಗೂ ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ವ್ಯವಸ್ಥೆ ಹೊಂದಿದ್ದ 91 ಜನರಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

ADVERTISEMENT

1,845 ಮಾದರಿ ಸಂಗ್ರಹ:ಸೋಂಕಿತರ ಪ್ರಾಥಮಿಕ ಸಂಪರ್ಕ, ಅನಾರೋಗ್ಯ ಲಕ್ಷಣಗಳಿದ್ದ ಹಾಗೂ ಕೋವಿಡ್‌ ಹಾಟ್‌ಸ್ಪಾಟ್‌ಗಳ ಸಂಪರ್ಕವಿದ್ದ 1,845 ಜನರ ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 1,610 ವರದಿ ಬರುವುದು ಬಾಕಿ ಇದೆ.

ಮಂಗಳವಾರ 183 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣವಾದವರ ಸಂಖ್ಯೆ 3,768ಕ್ಕೇರಿಕೆಯಾಗಿದೆ. ಸದ್ಯ 2676 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಸಂಖ್ಯೆ 6,510ಕ್ಕೇರಿದೆ.

ನಾಲ್ವರು ಸಾವು:ಮಂಗಳವಾರ ನಾಲ್ವರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದು, ಕಾರ್ಕಳದ 35 ವರ್ಷದ ವ್ಯಕ್ತಿ, ಬೈಂದೂರಿನ 48 ವರ್ಷದ ಪುರುಷ, ಉಡುಪಿಯ 66 ಹಾಗೂ 41 ವರ್ಷದ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆ 70ಕ್ಕೇರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.