ADVERTISEMENT

ಉಡುಪಿಯಲ್ಲಿ ಕೋವಿಡ್‌ಗೆ ಮೂರು ಸಾವು: 90 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 4:29 IST
Last Updated 11 ಆಗಸ್ಟ್ 2020, 4:29 IST

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಮೂವರು ಸೋಂಕಿತರು ಮೃತಪಟ್ಟಿದ್ದು 90 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 62 ವರ್ಷ ಮಹಿಳೆ, ಕುಂದಾಪುರದ 79 ವರ್ಷದ ವೃದ್ಧ, ಉಡುಪಿಯ 81 ವರ್ಷದ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ 117 ಸೇರಿ ಜಿಲ್ಲೆಯಲ್ಲಿ ಇದುವರೆಗೂ 3,462 ಸೋಂಕಿತರು ಗುಣಮುಖರಾಗಿದ್ದಾರೆ. 2,762 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಸಂಖ್ಯೆ 6,291ಕ್ಕೇರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವೆರಗೂ 66 ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.