ADVERTISEMENT

ಉಡುಪಿ | 5000 ಗಡಿ ದಾಟಿದ ಗುಣಮುಖರ ಸಂಖ್ಯೆ

ಸಕ್ರಿಯ ಪ್ರಕರಣ 2,560 ಮಾತ್ರ; ಶನಿವಾರ 241 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 14:27 IST
Last Updated 15 ಆಗಸ್ಟ್ 2020, 14:27 IST
   

ಉಡುಪಿ: ಇಬ್ಬರು ಕೋವಿಡ್‌ ಸೋಂಕಿತರ ಸಾವಿನೊಂದಿಗೆ ಶನಿವಾರ ಜಿಲ್ಲೆಯಲ್ಲಿ 241 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 138 ಕುಂದಾಪರದ 70 ಹಾಗೂ ಕಾರ್ಕಳದ 30 ಹಾಗೂ ಬೇರೆ ಜಿಲ್ಲೆಗಳ ಮೂವರು ಇದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 131, ಐಎಲ್‌ಐ ಲಕ್ಷಣಗಳಿದ್ದ 40 ಜನರಿಗೆ ಸೋಂಕು ತಗುಲಿದ್ದು, 71 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. 191 ಸೋಂಕಿತರಲ್ಲಿ ರೋಗ ಲಕ್ಷಣಗಳು ಕಂಡುಬಂದರೆ, 50 ಜನರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ.

186 ಸೋಂಕಿತರಿಗೆ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, 55 ಮಂದಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

ADVERTISEMENT

1,632 ಮಾದರಿ ಸಂಗ್ರಹ:ಸೋಂಕು ಲಕ್ಷಣಗಳು ಕಂಡುಬಂದ ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದ1,632 ಮಾದರಿ ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

229 ಗುಣಮುಖ:ಶನಿವಾರ 229 ರೋಗಿಗಳು ಗುಣಮುಖರಾಗಿದ್ದು, ಇದುವರೆಗೂ 5,101 ಸೋಂಕಿತರು ಗುಣರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,560 ಸಕ್ರಿಯ ಸೋಂಕಿತ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 7,738ಕ್ಕೇರಿದೆ.

ಇಬ್ಬರು ಸಾವು:ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಕೋವಿಡ್ ಸೋಂಕಿತರು ಶನಿವಾರ ಮೃತಪಟ್ಟಿದ್ದಾರೆ. ಉಡುಪಿಯ 65 ಹಾಗೂ 43 ವರ್ಷ ವ್ಯಕ್ತಿಗಳು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 77ಕ್ಕೇರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.