ADVERTISEMENT

61 ಮಂದಿಗೆ ಕೋವಿಡ್‌: ಒಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 14:27 IST
Last Updated 6 ನವೆಂಬರ್ 2020, 14:27 IST

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 61 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಸೋಂಕಿನಿಂದ ಉಡುಪಿಯ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಉಡುಪಿಯ 14, ಕುಂದಾಪುರದ 15, ಕಾರ್ಕಳದ 27 ಹಾಗೂ ಇತರೆ ಜಿಲ್ಲೆಗಳ ಐವರಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ 8, ಹೋಂ ಐಸೊಲೇಷನ್‌ನಲ್ಲಿ 53 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಸೋಂಕಿತರು ಸೇರಿ ಜಿಲ್ಲೆಯಲ್ಲಿ ಇದುವರೆಗೂ 21,532 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 22,143 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 427 ಇದೆ. 186 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT