ಉಡುಪಿ: ಜಿಲ್ಲೆಯಲ್ಲಿ ಭಾನುವಾರ ಕೋವಿಡ್ನಿಂದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಕಾರ್ಕಳದ 69 ವರ್ಷದ ವ್ಯಕ್ತಿ ಮೃತರಾದವರು. ಇದುವರೆಗೂ 191 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಭಾನುವಾರ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು 115 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ. ಸೋಂಕಿತರಲ್ಲಿ 72 ಪುರುಷರು ಹಾಗೂ 43 ಮಹಿಳೆಯರಿದ್ದಾರೆ. ಉಡುಪಿಯ 84, ಕುಂದಾಪುರದ 24 ಹಾಗೂ ಕಾರ್ಕಳದ 7 ಮಂದಿಗೆ ಸೋಂಕು ತಗುಲಿದೆ. ಇದುವರೆಗೂ 24,046 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 824 ಸಕ್ರಿಯ ಸೋಂಕಿತರು ಇದ್ದಾರೆ.
ಮತ್ತೊಂದೆಡೆ ಲಸಿಕಾ ಅಭಿಯಾನ ಪ್ರಗತಿಯಲ್ಲಿದ್ದು, ಮೊದಲ ಹಂತದಲ್ಲಿ 21,435 ಮಂದಿಗೆ ಮೊದಲ ಡೋಸ್, 15721 ಮಂದಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. 2ನೇ ಹಂತದಲ್ಲಿ 3,853 ಮಂದಿಗೆ ಮೊದಲ ಡೋಸ್, 2,058 ಮಂದಿಗೆ ಎರಡನೇ ಡೋಸ್, 45 ರಿಂದ 49 ವರ್ಷದೊಳಗಿನ 8,075 ಮಂದಿಗೆ ಹಾಗೂ 60 ವರ್ಷ ಮೇಲ್ಪಟ್ಟ 46,649 ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 97791 ಮಂದಿ ಚುಚ್ಚುಮದ್ದು ಹಾಕಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.