ಉಡುಪಿ: ಜಿಲ್ಲೆಯಲ್ಲಿ ಬುಧವಾರ ಮೂವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಉಡುಪಿಯ 65, 81 ಹಾಗೂ 53 ವರ್ಷದ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 206ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣವೂ ಹೆಚ್ಚಾಗುತ್ತಿದ್ದು ಒಂದೇ ದಿನ 1,656 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೂ ಒಂದೇ ದಿನ ದಾಖಲಾದ ಗರಿಷ್ಠ ಸೋಂಕಿನ ಪ್ರಮಾಣ ಇದಾಗಿದೆ. ಉಡುಪಿ ತಾಲ್ಲೂಕಿನ 879, ಕುಂದಾಪುರ ತಾಲ್ಲೂಕಿನ 399, ಕಾರ್ಕಳದ 371 ಹಾಗೂ ಬೇರೆ ಜಿಲ್ಲೆಗಳ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
409 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡರೆ 1247 ಮಂದಿಯಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ. 48 ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾದರೆ, 1608 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.