ಉಡುಪಿ: ಜಿಲ್ಲೆಯಲ್ಲಿ ಭಾನುವಾರ 13 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಉಡುಪಿಯ 11, ಕುಂದಾಪುರ, ಕಾರ್ಕಳದ ತಲಾ ಒಬ್ಬರಿಗೆ ಸೋಂಕು ತಗುಲಿದೆ. 12 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದು, ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 12 ಪುರುಷರು, ಒಬ್ಬರು ಮಹಿಳೆಯರು ಇದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 23463 ಇದ್ದು, 58 ಸಕ್ರಿಯ ಸೋಂಕಿತರು ಇದ್ದಾರೆ. 23216 ಮಂದಿ ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.