ಉಡುಪಿ: ಜಿಲ್ಲೆಯಲ್ಲಿ ಸೋಮವಾರ 32 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಕುಂದಾಪುರದ 85 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದಾರೆ.
ಸೋಂಕಿತರಲ್ಲಿ ಉಡುಪಿಯ 13, ಕುಂದಾಪುರದ 12, ಕಾರ್ಕಳದ 8, ಬೇರೆ ಜಿಲ್ಲೆಗಳ ಇಬ್ಬರು ಇದ್ದು, 14 ಮಹಿಳೆಯರು, 18 ಪುರುಷರಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳು 21,965 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 551 ಇವೆ. ಸೋಮವಾರ 137 ಸೇರಿ ಇದುವರೆಗೂ 21,232 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ 183 ಸಾವು ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.