ADVERTISEMENT

ಉಡುಪಿ: ಕೋವಿಡ್‌ಗೆ ವೃದ್ಧ ಸಾವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 17:05 IST
Last Updated 20 ಏಪ್ರಿಲ್ 2021, 17:05 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ ಉಡುಪಿ ತಾಲ್ಲೂಕಿನ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಹೃದ್ರೋಗ, ಕಿಡ್ನಿ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

109 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿಯ 28, ಕುಂದಾಪುರದ 29, ಕಾರ್ಕಳದ 49 ಹಾಗೂ ಬೇರೆ ಜಿಲ್ಲೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. 20 ಸೋಂಕಿತರು ಆಸ್ಪತ್ರೆಗಳಲ್ಲಿ, 89 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರಲ್ಲಿ 58 ಮಹಿಳೆಯರು ಹಾಗೂ 51 ಮಹಿಳೆಯರಿದ್ದು, 28 ಮಂದಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, 81 ಮಂದಿಯಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ.

ADVERTISEMENT

ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,012ಕ್ಕೆ ಏರಿಕೆಯಾಗಿದ್ದು, 742 ಸಕ್ರಿಯ ಸೋಂಕಿತರು ಇದ್ದಾರೆ. 26077 ಸೋಂಕಿತರು ಗುಣಮುಖರಾಗಿದ್ದು, 194 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.