ADVERTISEMENT

215 ಮಂದಿಗೆ ಕೋವಿಡ್‌; ಒಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 14:57 IST
Last Updated 19 ಸೆಪ್ಟೆಂಬರ್ 2020, 14:57 IST

ಉಡುಪಿ: ಜಿಲ್ಲೆಯಲ್ಲಿ ಶನಿವಾರ 215 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 121, ಕುಂದಾಪುರದ 50, ಕಾರ್ಕಳದ 35 ಹಾಗೂ ಇತರೆ ಜಿಲ್ಲೆಗಳ 9 ಸೋಂಕಿತರಿದ್ದಾರೆ.

ಪ್ರಾಥಮಿಕ ಸಂಪರ್ಕದಿಂದ 98, ಐಎಲ್‌ಐ ಲಕ್ಷಣಗಳಿದ್ದ 68, ತೀವ್ರ ಉಸಿರಾಟದ ಸಮಸ್ಯೆಯಿದ್ದ ಮೂವರಿಗೆ, ಅಂತರ ಜಿಲ್ಲಾ ಪ್ರಯಾಣದಿಂದ ಒಬ್ಬರಿಗೆ ಸೋಂಕು ತಗಲಿದೆ. 45 ಸೋಂಕಿತರ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

112 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ 103 ಮಂದಿಯಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ. ಶನಿವಾರ 1054 ಶಂಕಿತರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ADVERTISEMENT

311 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 13621 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1337 ಸಕ್ರಿಯ ಸೋಂಕಿತ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 15098ಕ್ಕೇರಿಕೆಯಾಗಿದೆ.

ಶನಿವಾರ ಉಡುಪಿ ತಾಲ್ಲೂಕಿನ 52 ವರ್ಷದ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 140ಕ್ಕೇರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.