ADVERTISEMENT

ಉಡುಪಿ: ಸಕ್ರಿಯ ಸೋಂಕಿತರ ಸಂಖ್ಯೆ 240 ಮಾತ್ರ

ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ಇಳಿಮುಖ; 21,892 ಗುಣಮುಖ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 15:12 IST
Last Updated 15 ನವೆಂಬರ್ 2020, 15:12 IST

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 14 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 11, ಕುಂದಾಪುರದ ಇಬ್ಬರು ಹಾಗೂ ಕಾರ್ಕಳದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

56 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 21,892 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,350 ಇದ್ದು, ಸಕ್ರಿಯ ಸೋಂಕಿತರು ಕೇವಲ 240 ಮಂದಿ ಇದ್ದಾರೆ. 187 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT