ADVERTISEMENT

ಉಡುಪಿ: 38 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 15:49 IST
Last Updated 29 ನವೆಂಬರ್ 2020, 15:49 IST

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 38 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 21, ಕುಂದಾಪುರದ 9, ಕಾರ್ಕಳದ 7 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. 8 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 30 ಮಂದಿಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

23 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 22,269 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,675 ಇದ್ದು, 219 ಸಕ್ರಿಯ ಸೋಂಕಿತರು ಮಾತ್ರ ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT