ಉಡುಪಿ: ಜಿಲ್ಲೆಯಲ್ಲಿ ಗುರುವಾರ 237 ಕೋವಿಡ್–19 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 123, ಕುಂದಾಪುರ ತಾಲ್ಲೂಕಿನ 68, ಕಾರ್ಕಳ ತಾಲ್ಲೂಕಿನ 46 ಇದ್ದಾರೆ.
ಉಡುಪಿ ತಾಲ್ಲೂಕಿನ 68 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. 379 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 16,692 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 18,779 ಇದ್ದು, ಸಕ್ರಿಯ ಪ್ರಕರಣಗಳು 1,952 ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.