ADVERTISEMENT

47 ಕೋವಿಡ್‌ ಪಾಸಿಟಿವ್‌’ ಒಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 16:36 IST
Last Updated 5 ನವೆಂಬರ್ 2020, 16:36 IST

ಉಡುಪಿ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿದ್ದು, 47 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿಯ 54 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಸೋಂಕಿತರಲ್ಲಿ ಉಡುಪಿಯ 19, ಕುಂದಾಪುರದ 16, ಕಾರ್ಕಳದ 6 ಹಾಗೂ ಇತರೆ ಜಿಲ್ಲೆಗಳ 6 ಮಂದಿ ಇದ್ದು, 18 ಮಹಿಳೆಯರು 29 ಪುರುಷರಿಗೆ ಸೋಂಕು ತಗುಲಿದೆ.

ಗುರುವಾರ 66 ಸೇರಿ 21,468 ಮಂದಿ ಗುಣಮುಖರಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 431 ಇದೆ. ಒಟ್ಟು ಸೋಂಕಿತ ಪ್ರಕರಣಗಳು 22,082 ಇದ್ದು, ಇದುವರೆಗೂ 185 ಸಾವಿನ ಪ್ರಕರಣಗಳು ವರದಿಯಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.