ಉಡುಪಿ: ಜಿಲ್ಲೆಯಲ್ಲಿ ಗುರುವಾರ 19 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಉಡುಪಿಯ 14, ಕುಂದಾಪುರದ ಮೂವರು, ಕಾರ್ಕಳದ ಒಬ್ಬರು ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.
ಕೋವಿಡ್ ಆಸ್ಪತ್ರೆಯಲ್ಲಿ 6, ಹೋಂ ಐಸೊಲೇಷನ್‌ನಲ್ಲಿ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 27 ಸೇರಿ ಇದುವರೆಗೂ 22,058 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳು 22,452 ಇದ್ದು, 208 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.