ADVERTISEMENT

ಉಡುಪಿ: ನಾಲ್ವರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 15:43 IST
Last Updated 7 ಜನವರಿ 2021, 15:43 IST

ಉಡುಪಿ: ಜಿಲ್ಲೆಯಲ್ಲಿ ಗುರುವಾರ ನಾಲ್ವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿಯ ಮೂವರು, ಕಾರ್ಕಳದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಬ್ಬರು ಕೋವಿಡ್‌ ಆಸ್ಪತ್ರೆಯಲ್ಲಿ ಹಾಗೂ ಮೂವರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

20 ಮಂದಿ ಗುಣಮುಖರಾಗಿದ್ದು, ಇದುವರೆಗೂ 22,871 ಮಂದಿ ಸೋಂಕುಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳು 23,153 ಇದ್ದು, 93 ಸಕ್ರಿಯ ಸೋಂಕಿತ ಪ್ರಕರಣಗಳಿವೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT