ADVERTISEMENT

ಉಡುಪಿ: 27 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 15:15 IST
Last Updated 10 ನವೆಂಬರ್ 2020, 15:15 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 27 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 9, ಕುಂದಾಪುರದ 12, ಕಾರ್ಕಳದ 5 ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ಕೋವಿಡ್‌ ಆಸ್ಪತ್ರೆಯಲ್ಲಿ ಮೂವರು, ಹೋಂ ಐಸೊಲೇಷನ್‌ನಲ್ಲಿ 24 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 1914 ಶಂಕಿತರ ಗಂಟಲ ದ್ರವವನ್ನು ಪರೀಕ್ಷೆಗೊಳಪಡಿಸಿದ್ದು, 27 ವರದಿ ಪಾಸಿಟಿವ್‌ ಹಾಗೂ 1,887 ವರದಿಗಳು ನೆಗೆಟಿವ್ ಬಂದಿವೆ

ಮಂಗಳವಾರ 47 ಸೇರಿ ಇದುವರೆಗೂ 21,740 ಮಂದಿ ಗುಣಮುಖರಾಗಿದ್ದು, 333 ಸಕ್ರಿಯ ಸೋಂಕಿತರು ಇದ್ದಾರೆ. ಒಟ್ಟು ಪ್ರಕರಣಗಳು 22,259 ಇದ್ದು, 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.