ಉಡುಪಿ: ಜಿಲ್ಲೆಯಲ್ಲಿ ಗುರುವಾರ ಒಂದು ವರ್ಷದ ಮಗು ಸೇರಿ 14 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಮೂವರು ಮಹಿಳೆಯರು, 7 ಪುರುಷರು ಹಾಗೂ ನಾಲ್ವರು ಮಕ್ಕಳು ಸೋಂಕಿತರಾಗಿದ್ದಾರೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹಾರಾಷ್ಟ್ರದಿಂದ ಬಂದಿರುವ ನಾಲ್ವರಿಗೆ, ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ನಾಲ್ವರು, ಕೇರಳದಿಂದ ಬಂದಿದ್ದ ಒಬ್ಬರು, ರೋಗಿ ಸಂಖ್ಯೆ ಪಿ–10188 ಸಂಪರ್ಕದಿಂದ ಇಬ್ಬರಿಗೆ, ಪಿ–3555 ಸಂಪರ್ಕದಿಂದ ಒಬ್ಬರಿಗೆ, ಪಿ–9768 ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ. ಒಬ್ಬರ ಸೋಂಕಿತ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಸೋಂಕಿತರ ಜತೆಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತ ಜ್ವರದ ಲಕ್ಷಣಗಳಿರುವ, ಉಸಿರಾಟದ ತೊಂದರೆ ಇರುವ 811 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 938 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 16 ಜನರನ್ನು ಐಸೊಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1242ಕ್ಕೇರಿಕೆಯಾಗಿದ್ದು, 149 ಸಕ್ರಿಯ ಪ್ರಕರಣಗಳು ಮಾತ್ರ ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.