ಉಡುಪಿ: ಜಿಲ್ಲೆಯಲ್ಲಿ ಬುಧವಾರ 16 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಉಡುಪಿಯ 5, ಕುಂದಾಪುರದ ಮೂವರು, ಕಾರ್ಕಳದ 7 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಐವರು ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ 11 ಮಂದಿ ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
15 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 22,617ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 22,929 ಇದ್ದು, 125 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.