ADVERTISEMENT

ಉಡುಪಿ: 116 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 14:40 IST
Last Updated 21 ಅಕ್ಟೋಬರ್ 2020, 14:40 IST
   

ಉಡುಪಿ: ಬುಧವಾರ ಜಿಲ್ಲೆಯಲ್ಲಿ 116 ಕೋವಿಡ್–19 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಪ್ರಕರಣಗಳ ಸಂಖ್ಯೆ 21,153ಕ್ಕೆ ಏರಿಕೆಯಾಗಿವೆ.

ಸೋಂಕಿತರಲ್ಲಿ ಉಡುಪಿಯ 65, ಕುಂದಾಪುರದ 22, ಕಾರ್ಕಳದ 22 ಹಾಗೂ ಬೇರೆ ಜಿಲ್ಲೆಯ ಒಬ್ಬರು ಇದ್ದಾರೆ. 63 ಪುರುಷರಿಗೆ, 53 ಮಹಿಳೆಯರಿಗೆ ಸೋಂಕು ತಗುಲಿದ್ದು, 33 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ, 83 ಜನರಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ.

ಬುಧವಾರ 191 ಸೋಂಕಿತರು ಸೇರಿ ಜಿಲ್ಲೆಯಲ್ಲಿ 19,305 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಸೋಂಕಿತರು 1,688 ಇದ್ದು, 176 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.