ADVERTISEMENT

ಉಡುಪಿ: 19 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 15:17 IST
Last Updated 11 ನವೆಂಬರ್ 2020, 15:17 IST

ಉಡುಪಿ: ಜಿಲ್ಲೆಯಲ್ಲಿ ಬುಧವಾರ 19 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 8, ಕುಂದಾಪುರದ 3, ಕಾರ್ಕಳದ 7 ಹಾಗೂ ನೆರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಐವರು ಕೋವಿಡ್‌ ಆಸ್ಪತ್ರೆಯಲ್ಲಿ, 14 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ 31 ಸೇರಿ ಇದುವರೆಗೂ 21771 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 321 ಸಕ್ರಿಯ ಸೋಂಕಿತರು ಮಾತ್ರ ಇದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,278 ಇದ್ದು, 187 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT