ADVERTISEMENT

ಉಡುಪಿ: 42 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 15:02 IST
Last Updated 8 ನವೆಂಬರ್ 2020, 15:02 IST

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 42 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡಪಿಯ 29, ಕುಂದಾಪುರದ 6, ಕಾರ್ಕಳದ 7 ಜನರಿಗೆ ಸೋಂಕು ತಗುಲಿದೆ.

ಇಬ್ಬರು ಕೋವಿಡ್‌ ಆಸ್ಪತ್ರೆಯಲ್ಲಿ, 40 ಸೋಂಕಿತು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ 41 ಸೇರಿ ಇದುವರೆಗೂ ಜಿಲ್ಲೆಯಲ್ಲಿ 21,639 ಸೋಂಕಿತರು ಗುಣಮುಖರಾಗಿದ್ದಾರೆ. ಸಕ್ರಿಯ ಸೋಂಕಿತ ಪ್ರಕರಣಗಳು 378 ಇದ್ದು, ಒಟ್ಟು ಪ್ರಕರಣಗಳ ಸಂಖ್ಯೆ 22,203 ಇವೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT