ADVERTISEMENT

ನಾಲ್ವರು ಸೋಂಕಿತರು ಸಾವು: 233 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 1:16 IST
Last Updated 22 ಸೆಪ್ಟೆಂಬರ್ 2020, 1:16 IST

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ನಾಲ್ವರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದು 233 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಕಾರ್ಕಳದ 72 ವರ್ಷದ ವೃದ್ಧೆ, ಉಡುಪಿಯ 70 ಹಾಗೂ84 ವರ್ಷದ ವೃದ್ಧರು, ಕುಂದಾಪುರದ 66 ವರ್ಷದ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಾವಿನ ಸಂಖ್ಯೆ 144ಕ್ಕೇರಿಕೆಯಾಗಿದೆ.

233 ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 111, ಕುಂದಾಪುದ 55, ಕಾರ್ಕಳದ 47 ಹಾಗೂ ಇತರೆ ಜಿಲ್ಲೆಗಳ 20 ಮಂದಿ ಇದ್ದಾರೆ. 135 ಮಂದಿಯಲ್ಲಿ ಸೋಂಕಿನ ಲಕ್ಷಣಗಳಿದ್ದರೆ 98 ಜನರಲ್ಲಿ ಲಕ್ಷಣಗಳಿಲ್ಲ.

ADVERTISEMENT

ಸೋಂಕಿನ ಲಕ್ಷಣಗಳು ಕಂಡುಬಂದ 792 ಶಂಕಿತರ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಸೋಮವಾರ 278 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಗುಣರಾದವರ ಸಂಖ್ಯೆ 14,114ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,624 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1366 ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.