ಉಡುಪಿ: ಜಿಲ್ಲೆಯಲ್ಲಿ ಬುಧವಾರ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದು, 197 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 116, ಕುಂದಾಪುರದ 41, ಕಾರ್ಕಳದ 38 ಹಾಗೂ ಇತರೆ ಜಿಲ್ಲೆಗಳ ಇಬ್ಬರು ಸೇರಿದ್ದಾರೆ. 110 ಪುರುಷರಿಗೆ, 87 ಮಹಿಳೆಯರಿಗೆ ಸೋಂಕು ತಗುಲಿದೆ.
67 ಸೋಂಕಿತರಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದರೆ, 130 ಮಂದಿಗೆ ಲಕ್ಷಣಗಳು ಇಲ್ಲ. ಕೋವಿಡ್ ಆಸ್ಪತ್ರೆಗಳಲ್ಲಿ 32, ಹೋಂ ಐಸೊಲೇಷನ್‌ನಲ್ಲಿ 165 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿಯ 82 ವರ್ಷ ವೃದ್ಧ, 46 ವರ್ಷದ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯ 170ಕ್ಕೆ ಏರಿಕೆಯಾಗಿದೆ.
ಸೋಂಕಿತರ ಒಟ್ಟು ಸಂಖ್ಯೆ 20,078ಕ್ಕೆ ಏರಿದ್ದು, 2,026 ಸಕ್ರಿಯ ಸೋಂಕಿತರು ಇದ್ದಾರೆ. ಬುಧವಾರ 163 ಮಂದಿ ಗುಣಮುಖರಾಗಿದ್ದು, ಇದುವರೆಗೂ 17,901 ರೋಗಿಗಳು ಸೋಂಕುಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿ 1,49,676 ಶಂಕಿತರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಅವರಲ್ಲಿ 1,29,598 ಜನರಿಗೆ ನೆಗೆಟಿವ್ ಬಂದಿದ್ದರೆ, 20,078 ಜನರಿಗೆ ಪಾಸಿಟಿವ್ ಫಲಿತಾಂಶ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.