
ಪ್ರಜಾವಾಣಿ ವಾರ್ತೆ
ಬಂಧನ
ಬ್ರಹ್ಮಾವರ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿ ಮೊಬೈಲ್ ಬಳಸಿ ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಒಟ್ಟು ಸೇರಿಸಿಕೊಂಡು ಅವರಿಂದ ಹಣ ಸಂಗ್ರಹಿಸಿ ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಹಂಗಾರಕಟ್ಟೆಯ ಮನಿತ್ ಬಂಧಿತ ಆರೋಪಿ. ಈತನಿಂದ ಮೊಬೈಲ್ ಹಾಗೂ ₹ 800 ಪಡೆದುಕೊಳ್ಳಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.