ಹೆಬ್ರಿ: ತಾಲ್ಲೂಕು ವ್ಯಾಪ್ತಿಯಲ್ಲಿ ತೋಟಗಾರಿಕೆಗೆ ಸಂಬಂಧಿಸಿದ 5 ಸಾವಿರಕ್ಕೂ ಅಧಿಕ ಗಿಡ–ಮರಗಳಿಗೆ ಹಾನಿಯಾಗಿದ್ದು, ಶುಕ್ರವಾರ ಕಾರ್ಕಳ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಕಬ್ಬಿನಾಲೆಯಲ್ಲಿ ಪರಿಶೀಲನೆ ನಡೆಸಿದರು.
ಮಳೆಯಿಂದ ರೈತರಿಗೆ ಅಧಿಕ ಹಾನಿಯಾಗಿದೆ. ಕಾಳುಮೆಣಸು, ಕೊಕ್ಕೊ, ರಬ್ಬರ್, ತೆಂಗಿನ ತೋಟಕ್ಕೆ ಬಹಳ ಹಾನಿಯಾಗಿದೆ. ಆದ್ಯತೆ ನೆಲೆಯಲ್ಲಿ ರೈತರಿಗೆ ಕೆಲಸ ಮಾಡಿಕೊಡಲಾಗುವುದು. ಸ್ಥಳ ಪರಿಶೀಲನೆ ನಡೆಸಿ ಪ್ರತಿಯೊಬ್ಬ ರೈತರ ಸಮಸ್ಯೆ ಆಲಿಸಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.
ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.