ADVERTISEMENT

ಬೈಂದೂರು: ಮಕ್ಕಳಿಗೆ ವಿದ್ಯೆಯ ಜತೆಗೆ ಕೃಷಿ ಒಲವು ಬೆಳೆಸಿ

ಬಂಜರು ಭೂಮಿ ಹಸನಾಗಿಸಲು ವಿದ್ಯಾರ್ಥಿಗಳಿಂದ ಗದ್ದೆ ನಾಟಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 9 ಜುಲೈ 2023, 7:30 IST
Last Updated 9 ಜುಲೈ 2023, 7:30 IST
ಬೈಂದೂರಿನ ಶಿರೂರು ಕರಾವಳಿಯಲ್ಲಿ ಶನಿವಾರಬಂಜರು ಭೂಮಿ ಹಸನಾಗಿಸುವ ಸಂಕಲ್ಪದೊಂದಿಗೆ ‘ವಿದ್ಯಾರ್ಥಿಗಳಿಂದ ಗದ್ದೆ ನಾಟಿ’ ವಿಶೇಷ ಕಾರ್ಯಕ್ರಮವನ್ನು ಬೈಂದೂರು ಶಾಸಕರು ಗುರುರಾಜ್ ಗಂಟಿಹೊಳೆ ನಾಟಿ ಮಾಡುವ ಮೂಲಕ ಉದ್ಘಾಟಿಸಿದರು.
ಬೈಂದೂರಿನ ಶಿರೂರು ಕರಾವಳಿಯಲ್ಲಿ ಶನಿವಾರಬಂಜರು ಭೂಮಿ ಹಸನಾಗಿಸುವ ಸಂಕಲ್ಪದೊಂದಿಗೆ ‘ವಿದ್ಯಾರ್ಥಿಗಳಿಂದ ಗದ್ದೆ ನಾಟಿ’ ವಿಶೇಷ ಕಾರ್ಯಕ್ರಮವನ್ನು ಬೈಂದೂರು ಶಾಸಕರು ಗುರುರಾಜ್ ಗಂಟಿಹೊಳೆ ನಾಟಿ ಮಾಡುವ ಮೂಲಕ ಉದ್ಘಾಟಿಸಿದರು.   

ಬೈಂದೂರು: ‘ವ್ಯವಸಾಯ ದೇಶದ ಸಂಸ್ಕೃತಿಯಾಗಿದ್ದು ವಿದ್ಯಾರ್ಥಿಗಳಿಗೆ ವಿದ್ಯೆಯ ಜತೆಗೆ ಕೃಷಿಯ ಬಗ್ಗೆ ಒಲವು ಹಾಗೂ ಅರಿವು ಮೂಡಿಸುವುದು ಅಗತ್ಯವಿದೆ’ ಎಂದು ಬೈಂದೂರು ಶಾಸಕರು ಗುರುರಾಜ್ ಗಂಟಿಹೊಳೆ ಹೇಳಿದರು.

ಶಿರೂರು ಕರಾವಳಿಯಲ್ಲಿ ಶನಿವಾರ ಜೇಸಿಐ ಉಪ್ಪುಂದ, ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಸಂಯುಕ್ತ ಆಶ್ರಯದಲ್ಲಿ ಬಂಜರು ಭೂಮಿ ಹಸನಾಗಿಸುವ ಸಂಕಲ್ಪದೊಂದಿಗೆ ‘ವಿದ್ಯಾರ್ಥಿಗಳಿಂದ ಗದ್ದೆ ನಾಟಿ’ ಎಂಬ ವಿಶೇಷ ಕಾರ್ಯಕ್ರಮವನ್ನು ನಾಟಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜೇಸಿಐ ಉಪ್ಪುಂದ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾಲೇಜು ಪ್ರಾಂಶುಪಾಲ ನಾಗರಾಜ ಶೆಟ್ಟಿ, ಜೇಸಿಐ ವಲಯ 15ರ ಕಾರ್ಯಕ್ರಮ ವಿಭಾಗದ ನಿರ್ದೇಶಕಿ ಅಕ್ಷತಾ ಗಿರೀಶ್ ಐತಾಳ್, ಪತ್ರಕರ್ತ ಗಣೇಶ್ ಗಾಣಿಗ ಉಪ್ಪುಂದ, ಶಿರೂರು ರೈತರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಜೇಸಿಐ ನಿಕಟಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ, ಅಶೋಕ್ ಶೆಟ್ಟಿ ಕಾರಿಕಟ್ಟೆ, ಯುವಶಕ್ತಿ ಅಧ್ಯಕ್ಷ ವಿಠಲ ಬಿಲ್ಲವ, ಬೈಂದೂರು ಕೃಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಅನುಷಾ ಇದ್ದರು.

ADVERTISEMENT

ಶಿರೂರು ರೈತ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ ಹಾಗೂ ಪ್ರಗತಿಪರ ಕೃಷಿಕ ವೆಂಕಟ ಪೂಜಾರಿ ಕಾಳನಮನೆ ಅವರನ್ನು ಸನ್ಮಾನಿಸಲಾಯಿತು. ಎನ್.ಎಸ್.ಎಸ್. ಯೋಜನಾಧಿಕಾರಿ ಲತಾ ಪೂಜಾರಿ ಸ್ವಾಗತಿಸಿದರು. ನವೀನ್ ಎಚ್‌.ಜಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.