ADVERTISEMENT

ಉಡುಪಿ | ಪೊಲೀಸರ ಸೋಗಿನಲ್ಲಿ ಆನ್‌ಲೈನ್‌ನಲ್ಲಿ ಹಣ ವಂಚನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 6:44 IST
Last Updated 1 ಆಗಸ್ಟ್ 2025, 6:44 IST
<div class="paragraphs"><p> ವಂಚನೆ</p></div>

ವಂಚನೆ

   

ಉಡುಪಿ: ಸೈಬರ್‌ ಪೊಲೀಸರ ಸೋಗಿನಲ್ಲಿ ಆನ್‌ಲೈನ್‌ನಲ್ಲಿ ಹಣ ವಂಚಿಸಿರುವ ಕುರಿತು ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಿಯೋಲ್ಲಾ ಎಂಬುವವರಿಗೆ ಟೆಲಿಕಾಮ್ ರೆಗ್ಯುಲೇಟರಿ ಆಫ್ ಇಂಡಿಯಾದಿಂದ ಎಂದು ಹೇಳಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ನಿಮ್ಮ ವಿರುದ್ಧ ಕಿರುಕುಳ ಮತ್ತು ಸುಳ್ಳು ಜಾಹೀರಾತಿಗೆ ಸಂಬಂಧಿಸಿದ ದೂರುಗಳು ದಾಖಲಾಗಿದೆ ಎಂದು ಹೇಳಿದ್ದ. ಮುಂಬೈ ಸೈಬರ್ ಪೊಲೀಸ್‌ನವರಿಗೆ ಕರೆಯನ್ನು ವರ್ಗಾವಣೆ ಮಾಡುವುದಾಗಿಯೂ ತಿಳಿಸಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

ADVERTISEMENT

ಬಳಿಕ ಪೊಲೀಸ್ ಸಮವಸ್ತ್ರದ ಲ್ಲಿದ್ದ ವ್ಯಕ್ತಿ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಮಾಡಿ, ಡಿಜಿಟಲ್‌ ಅರೆಸ್ಟ್‌ ಮಾಡುವುದಾಗಿ ಬೆದರಿಸಿ ಒಟ್ಟು ₹6 ಲಕ್ಷ ಪಡೆದು ವಂಚಿಸಿರುವುದಾಗಿ ದೂರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.