ADVERTISEMENT

ವಾಯುಭಾರ ಕುಸಿತ: ಗಾಳಿಸಹಿತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 15:56 IST
Last Updated 1 ಡಿಸೆಂಬರ್ 2019, 15:56 IST
ತುಮಕೂರಿನಲ್ಲಿಯೂ ಭಾನುವಾರ ಮಳೆ ಸುರಿಯಿತು.
ತುಮಕೂರಿನಲ್ಲಿಯೂ ಭಾನುವಾರ ಮಳೆ ಸುರಿಯಿತು.   

ಉಡುಪಿ: ಪಶ್ಚಿಮ ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ಮೂರ್ನಾಲ್ಕು ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಇದೆ.

ವಾಯಭಾರ ಕುಸಿತದಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮೀನುಗಾರರು ಸಮುದ್ರಕ್ಕಿಳಿಯಬಾರದು. ಡಿ.4ರವರೆಗೂ ಕರಾವಳಿ ಭಾಗಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಎಚ್ಚರದಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವೆಡೆ ಭಾನುವಾರ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಕೆಲಹೊತ್ತು ತುಂತುರು ಮಳೆಯಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.