ಹೆಬ್ರಿ: ದಲಿತರಿಗೆ ಭೂಮಿ, ವಸತಿ ಹಕ್ಕು, ಇತರ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಎದುರು ಹಕ್ಕೊತ್ತಾಯ ಪ್ರತಿಭಟನೆ ಶುಕ್ರವಾರ ನಡೆಯಿತು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರ್ ಮಾತನಾಡಿ, ಅನೇಕ ದಲಿತರು ನಿರಾಶ್ರಿತರಾಗಿದ್ದಾರೆ. ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಭೂಮಿ, ವಸತಿ ಅತಿ ಅವಶ್ಯಕವಾಗಿ ಬೇಕಾಗಿದೆ. ನಮ್ಮವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಿ ಭೂಮಿ ಗುರುತಿಸಿ ಹಂಚಿಕೆ ಮಾಡಬೇಕು. ಸರ್ಕಾರ ನಮ್ಮ ಮನವಿ ಆಲಿಸಿ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಬಳಿಕ ಹಶೀಲ್ದಾರ್ ಮೂಲಕ ಮುಖ್ಯಮಂತ್ರಿ, ಕಂದಾಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಪ್ಪ ನಕ್ರೆ, ರಾಘವ ಕುಕ್ಕುಜೆ, ಅಣ್ಣಪ್ಪ, ರಾಮ, ಕೆ. ದೇವು, ದಲಿತ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.