ಉಡುಪಿ: ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುತ್ತವೆ. ಮತ್ತೊಬ್ಬರ ಗೆಲುವನ್ನು ಸಹ ಸಂಭ್ರಮಿಸುವ ಮನೋಭಾವವನ್ನು ನಾವು ಬೆೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌರಯುಕ್ತ ರಾಯಪ್ಪ, ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತರ್, ಉಡುಪಿ ತಾಲ್ಲೂಕು ಕ್ರೀಡಾಧಿಕಾರಿ ವಸಂತ್ ಜೋಗಿ, ಕಾಪು ತಾಲ್ಲೂಕು ಕ್ರೀಡಾಧಿಕಾರಿ ರಿತೇಶ್ ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.
ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರುಗಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.