ಬಂಧನ
(ಪ್ರಾತಿನಿಧಿಕ ಚಿತ್ರ)
ಪಡುಬಿದ್ರಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತೋಡಿನಲ್ಲಿ ಪತ್ತೆಯಾಗಿದೆ. ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಮೃತರನ್ನು ಎಲ್ಲೂರಿನ ಸದಾಶಿವ (77) ಎಂದು ಗುರುತಿಸಲಾಗಿದ್ದು, ಅವರು ಗದ್ದೆ ಕಡೆಗೆ ಹುಲ್ಲು ತರಲು ಹೋಗಿದ್ದರು. ಬಳಿಕ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದಾಶಿವ ಅವರನ್ನು ಹುಡುಕಾಟದಲ್ಲಿದ್ದಾಗ ವಿದ್ಯುತ್ ತಂತಿ ತುಂಡಾದ ಸ್ಥಳದಿಂದ ಸುಮಾರು 10 ಮೀಟರ್ ದೂರದಲ್ಲಿ ತೋಡಿನ ಸುಮಾರು 2 ಅಡಿ ನೀರಿನಲ್ಲಿ ಮೃತದೇಹ ಪತ್ತೆಯಾಯಿತು. ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.