ADVERTISEMENT

ಅವಹೇಳನಕಾರಿ ಹೇಳಿಕೆ ಆರೋಪ: ಮಹೇಶ್ ತಿಮರೋಡಿ 2 ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 9:24 IST
Last Updated 23 ಆಗಸ್ಟ್ 2025, 9:24 IST
<div class="paragraphs"><p>ಮಹೇಶ್ ಶೆಟ್ಟಿ ಅವರನ್ನು ಉಡುಪಿಯ ನ್ಯಾಯಾಲಯಕ್ಕೆ ಶನಿವಾರ ಹಾಜರು ಪಡಿಸಲಾಯಿತು</p></div>

ಮಹೇಶ್ ಶೆಟ್ಟಿ ಅವರನ್ನು ಉಡುಪಿಯ ನ್ಯಾಯಾಲಯಕ್ಕೆ ಶನಿವಾರ ಹಾಜರು ಪಡಿಸಲಾಯಿತು

   

ಉಡುಪಿ: ಬಿಜೆಪಿ ರಾಷ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾದ ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೋಲೀಸ್ ಕಸ್ಟಡಿಗೆ ಒಪ್ಪಿಸಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದ್ದರು.

ADVERTISEMENT

ತಿಮರೋಡಿ ಅವರನ್ನು 3.40 ಕ್ಕೆ ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಬಳಿಕ ಪೋಲಿಸರು ತಿಮರೋಡಿ ಅವರನ್ನು ವಿಚಾರಣೆಗೆ ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.