ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಡೆಂಗಿ ರೋಗ ಹರಡುವ ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನದ ಪ್ರಯುಕ್ತ ಶುಕ್ರವಾರ ಉಡುಪಿ ಪತ್ರಿಕಾ ಭವನದ ಪರಿಸರದಲ್ಲಿ ಲಾರ್ವ ಸಮೀಕ್ಷೆ ನಡೆಸಿ, ಲಾರ್ವಗಳನ್ನು ನಾಶ ಪಡಿಸಿ, ಸಾರ್ವಜನಿಕರಿಗೆ ಡೆಂಗಿ ಕುರಿತು ಅರಿವು ಮೂಡಿಸಲಾಯಿತು.
ಉಡುಪಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಚಾಲನೆ ನೀಡಿದರು. ಕಳೆದ ವರ್ಷ ಈ ಪರಿಸರದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿ ಕಂಡು ಬಂದ ಹಾಗೂ ಪ್ರಸ್ತುತ ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಜಾಸ್ತಿಯಾಗುತ್ತಿರುವ ಕಾರಣ ಕಾರ್ಯಕ್ರಮ ನಡೆಸಲಾಯಿತು.
ಹೂವಿನ ಕುಂಡ, ಅರೆಯುವ ಕಲ್ಲು, ಪ್ಲಾಸ್ಟಿಕ್ ಮುಚ್ಚಳಗಳಲ್ಲಿರುವ ನೀರಿನಲ್ಲಿ ಲಾರ್ವವನ್ನು ಪತ್ತೆ ಹಚ್ಚಿ ಬಳಿಕ ಅವುಗಳನ್ನು ನಾಶ ಪಡಿಸಲಾಯಿತು.
ಆರೋಗ್ಯ ಇಲಾಖೆಯ ಕೀಟಶಾಸ್ತ್ರ ತಜ್ಞೆ ಮುಕ್ತಾ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಾಜಿ ಅಧ್ಯಕ್ಷ ಜಯಕರ ಸುವರ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.