ADVERTISEMENT

‘ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ವಹಿಸಿ’

ಮಾನವ ಸರಪಳಿ, ಜನಜಾಗೃತಿ ಜಾಥಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 16 ಮೇ 2025, 14:36 IST
Last Updated 16 ಮೇ 2025, 14:36 IST
ರಾಷ್ಟ್ರೀಯ ಡೆಂಗಿ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ರಚಿಸಲಾಗಿತ್ತು
ರಾಷ್ಟ್ರೀಯ ಡೆಂಗಿ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ರಚಿಸಲಾಗಿತ್ತು   

ಉಡುಪಿ: ಡೆಂಗಿ ರೋಗ ಹರಡದಂತೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ನಗರದ ಅಲೆವೂರು ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಮಾನವ ಸರಪಳಿ, ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ರಾಯಭಾರಿಗಳಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಡೆಂಗಿ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ADVERTISEMENT

ಅಲೆವೂರು ಪಂಚಾಯಿತಿ ಅಧ್ಯಕ್ಷ ಯತೀಶ್ ಕುಮಾರ್, ಸದಸ್ಯ ಶ್ರೀಕಾಂತ್ ನಾಯಕ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ರೋಟರಿ ಮಣಿಪಾಲ್ ಹಿಲ್ಸ್ ಅಧ್ಯಕ್ಷೆ ಸುಪರ್ಣ ಶೆಟ್ಟಿ, ಸದಸ್ಯರಾದ ಸುದೇಶ್ ರೈ, ಸುಂದರಶೆಟ್ಟಿ ಹಾಗೂ ಭೋಜರಾಜ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ಮತ್ತು ಸಂಯೋಜಕರಾದ ಅನಿತಾ ಹಾಗೂ ಮಧುಸೂಧನ್, ಭೋದಕವರ್ಗ, ಕೀಟ ಶಾಸ್ತ್ರಜ್ಞೆ ಮುಕ್ತಾ ಆಚಾರಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಎಚ್. ಮತ್ತು ಚಂದ್ರಕಲಾ ಇದ್ದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ನಿರೂಪಿಸಿದರು. ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಂಜಲಿ ವಾಗ್ಲೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.