
ಹೆಬ್ರಿ: ಮಲ್ಪೆ- ಹೆಬ್ರಿ -ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಹೆಬ್ರಿ ಕೆಳಪೇಟೆಯಲ್ಲಿ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಸ್ಥಳೀಯರು ಗುರುವಾರ ಬ್ಯಾನರ್ ಅಳವಡಿಸಿ, ಪ್ರತಿಭಟನೆಯ ಎಚ್ಚರಿಕೆ ನೀಡಿದರು.
ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಕುಚ್ಚೂರು ಹಾಗೂ ನಾಡ್ಪಾಲು ಹರೀಶ ಶೆಟ್ಟಿ ಮಾತನಾಡಿ, ‘ನಾವು ನಿರಂತರವಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದ್ದರೂ ಹೆಬ್ರಿ ಕೆಳಪೇಟೆಯಲ್ಲಿ ಹೆದ್ದಾರಿಯ ದುರಸ್ತಿ ಕಾರ್ಯ ಮಾಡಿಲ್ಲ. ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರಿಗೆ ಅಪಾಯ ಎದುರಾಗಿದೆ. ವಾರದೊಳಗೆ ಹೆದ್ದಾರಿ ದುರಸ್ತಿ ಕಾರ್ಯ ನಡೆಸದಿದ್ದರೆ ಬೃಹತ್ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು. ಸ್ಥಳೀಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.