ADVERTISEMENT

ಪರಿಸರ ಆಸಕ್ತಿ ಬೆಳೆಸಿಕೊಳ್ಳಿ

ರಕ್ತದಾನ ಶಿಬಿರದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಕಮಲಾ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 14:32 IST
Last Updated 11 ಸೆಪ್ಟೆಂಬರ್ 2019, 14:32 IST
ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಆಯೋಜಿಸಿದ ಬೃಹತ್‌ ರಕ್ತದಾನ ಶಿಬಿರವನ್ನು ಉಡುಪಿ ಪವರ್‌ ಕರ್ಪೋರೇಶನ್‌ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ ಉದ್ಘಾಟಿಸಿದರು.ಪ್ರಜಾವಾಣಿ ಚಿತ್ರ
ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಆಯೋಜಿಸಿದ ಬೃಹತ್‌ ರಕ್ತದಾನ ಶಿಬಿರವನ್ನು ಉಡುಪಿ ಪವರ್‌ ಕರ್ಪೋರೇಶನ್‌ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ ಉದ್ಘಾಟಿಸಿದರು.ಪ್ರಜಾವಾಣಿ ಚಿತ್ರ   

ಉಡುಪಿ: ಪರಿಸರದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುವುದರ ಜತೆಗೆ ಪರಿಸರಕ್ಕೆ ನಮ್ಮಿಂದಾಗುವ ಕೊಡುಗೆಯನ್ನು ನೀಡಬೇಕು ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಽಕಾರಿ ಕೆ. ಕಮಲಾ ಹೇಳಿದರು.

ಕರ್ನಾಟಕ ರಾಜ್ಯ ಉಪವಲಯ ಅರಣ್ಯಅಧಿಕಾರಿಗಳ ಸಂಘ ಹಾಗೂ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅರಣ್ಯ ಹುತಾತ್ಮರ ಸ್ಮರಣಾರ್ಥವಾಗಿ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಆಯೋಜಿಸಿದ ಬೃಹತ್‌ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಮಕ್ಕಳಿಗೆ ಎಳವೆಯಲ್ಲಿಯೇ ಪರಿಸರ ಸಂರಕ್ಷಣೆಯ ಅವಶ್ಯಕತೆ ಹಾಗೂ ಕಾಡು ನಾಶದಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಪರಿಸರ ಸಂರಕ್ಷಣೆ ಎನ್ನುವುದು ಮನೆಯಿಂದಲೇ ಆರಂಭ ಆಗಬೇಕು. ಹಿರಿಯರು ನೀಡಿದ ಹಸಿರು ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ಕೂಡ ನಮ್ಮ ಮೇಲಿದೆ ಎಂದರು.

ADVERTISEMENT

ಕೇವಲ ಮಾತು, ಚರ್ಚೆಯಿಂದ ಪರಿಸರ ಸಂರಕ್ಷಣೆ ಅಸಾಧ್ಯ. ಪಶ್ಚಿಮ ಘಟ್ಟದಲ್ಲಿ ಖಾಸಗಿ ಜಾಗವನ್ನು ಗುರುತಿಸಲು ಸಾಧ್ಯವಾಗದಷ್ಟು ದಟ್ಟ ಅರಣ್ಯ ಬೆಳೆದಿದೆ. ಇಷ್ಟು ದಟ್ಟವಾದ ಅರಣ್ಯ ಪ್ರದೇಶವನ್ನು ಎಲ್ಲಿಯೂ ನೋಡಲು ಸಾಧ್ಯವಿಲ್ಲ. ಇದನ್ನು ಹಾಗೆಯೇ ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ಪವರ್‌ ಕರ್ಪೋರೇಶನ್‌ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ ಮಾತನಾಡಿ, ಅಭಿವೃದ್ಧಿ ಜತೆಗೆ ಹಸಿರು ಹೊದಿಕೆಯನ್ನು ಕಾಪಾಡಿಕೊಂಡು ಹೋಗುವುದು ಬಹಳ ಮುಖ್ಯ. ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು. ಕಾಡು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸುವ ಕಾರ್ಯ ಶ್ಲಾಘನೀಯವಾದುದು ಎಂದರು.

ಅರಣ್ಯ ಸಂರಕ್ಷಣಾಧಿಽಕಾರಿ ಲೋಹಿತ್‌, ಡಾ. ಶಶಿಕಲಾ, ಡಾ. ಚಂದ್ರಶೇಖರ್‌, ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಸಂರಕ್ಷಣಾಧಿಽಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಜೀವದಾಸ್‌ ಶೆಟ್ಟಿ ಶೆಟ್ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್‌, ರಾಜ್ಯ ಅರಣ್ಯ ರಕ್ಷಕರು ಮತ್ತು ವೀಕ್ಷಕರು ಸಂಘದ ಕುಂದಾಪುರ ಉಪವಿಭಾಗದ ಅಧ್ಯಕ್ಷ ಮಂಜುನಾಥ್‌ ಜಿ. ನಾಯ್ಕ್‌ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘದ ಗೌರವಾಧ್ಯಕ್ಷ ಮುಡೂರ ಕೊಠಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗೇಶ್‌ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು. ಎ. ಜಯರಾಮ್‌ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.