ಉಡುಪಿ: ಕೋವಿಡ್–19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಏ.21ರ ರಾತ್ರಿ 9 ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಕ್ಷೇತ್ರದ ಸಂಪ್ರದಾಯದಂತೆ ನಿತ್ಯದ ಪೂಜಾ ವಿಧಿವಿಧಾನಗಳು ಮಾತ್ರ ನಡೆಯಲಿದೆ. ಭಕ್ತರಿಗೆ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.