ಬಾರ್ಕೂರು (ಬ್ರಹ್ಮಾವರ): ಬಾರ್ಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಗ್ರಂಥಾಲಯ ವಿಭಾಗ ಮತ್ತು ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಡಿಜಿಟಲ್ ಗ್ರಂಥಾಲಯ ಕುರಿತು ವಿಶೇಷ ಉಪನ್ಯಾಸ, ಡಿಜಿಟಲ್ ಗ್ರಂಥಾಲಯ ಉದ್ಘಾಟನಾ ಸಮಾರಂಭ ನಡೆಯಿತು.
ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಸಳ್ವಾಡಿ ಮಾತನಾಡಿ, ಡಿಜಿಟಲ್ ಗ್ರಂಥಾಲಯ ಸೌಲಭ್ಯದಿಂದ ವಿದ್ಯಾರ್ಥಿಗಳಿಗೆ ಅವರ ಅನುಕೂಲಕ್ಕೆ ತಕ್ಕಂತೆ ಪುಸ್ತಕಗಳನ್ನು ಓದಲು ಅವಕಾಶವಿದೆ. ಇದರಿಂದ ಹೆಚ್ಚಿನ ಅಧ್ಯಯನ ನಡೆಸಲು ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಕೊಂಡು ಶೈಕ್ಷಣಿಕೆ ಸಾಧನೆ ಮಾಡಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಉಡುಪಿ ಅಜ್ಜರಕಾಡು ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ಹೆಚ್ಚಿಸಿಕೊಳ್ಳಲು ಗ್ರಂಥಾಲಯವನ್ನು ಬಳಸಿಕೊಂಡು ಗುರಿ ಸಾಧಿಸಿ ಎಂದರು.
ಮಂಗಳೂರಿನ ಎಡ್ವೈಸ್ ಸಂಸ್ಥೆಯ ಮಾಲೀಕ ಧೀರಜ್ ಎಸ್. ಡಿಜಿಟಲ್ ಗ್ರಂಥಾಲಯದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಕಾಲೇಜಿನ ಗ್ರಂಥಪಾಲಕ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಹೇಮಾ ಎಸ್. ಕೊಡದ್, ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ, ಗ್ರಂಥಾಲಯ ಸಹಾಯಕ ಮಂಜುನಾಥ ಭಾಗವಹಿಸಿದ್ದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್.ಎ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.