ನಾಯಿ
(ಸಾಂದರ್ಭಿಕ ಚಿತ್ರ)
ಕಾರ್ಕಳ (ಉಡುಪಿ): ತಾಲ್ಲೂಕಿನ ಮರ್ಣೆಯಲ್ಲಿ ನಾಯಿಗೆ ವಿಷ ಹಾಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಸುಳಿವು ನೀಡಿದವರಿಗೆ ₹ 50 ಸಾವಿರ ಬಹುಮಾನ ನೀಡಲಾಗುವುದು ಎಂದು ‘ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್’ (ಪೆಟಾ) ಘೋಷಿಸಿದೆ.
ಜೂನ್ 6 ರಂದು ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನ ಪರಿಸರದಲ್ಲಿ ನಾಯಿಯ ಕಳೇಬರ ಪತ್ತೆಯಾಗಿತ್ತು. ನಾಯಿಗೆ ವಿಷ ಉಣಿಸಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಪ್ರಕರಣ ಮಾಹಿತಿ ಪಡೆದ ಪೆಟಾ ಸಂಸ್ಥೆಯು ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದೆ. ಕೊಟ್ಟ ಮಾಹಿತಿಯನ್ನು ಗೋಪ್ಯವಾಗಿಡಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.