ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ವತಿಯಿಂದ ನೀಡುವ
‘ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ’ಗೆ ಕತೆಗಾರ ದಯಾನಂದ ಅವರ ‘ಬುದ್ಧನ ಕಿವಿ’ ಕಥಾ ಸಂಕಲನ ಆಯ್ಕೆಯಾಗಿದೆ.
ಪ್ರಶಸ್ತಿಯು ₹15ಸಾವಿರ ನಗದು ಹಾಗೂ ಬೆಳ್ಳಿ ಫಲಕ ಒಳಗೊಂಡಿದೆ. ಲೇಖಕರಾದ ಎಚ್.ಆರ್. ಸುಜಾತ, ಪ್ರೊ. ಕೆ. ಫಣಿರಾಜ್, ಟಿ.ಎಸ್. ಗೊರವರ ತೀರ್ಪುಗಾರರಾಗಿದ್ದರು.
ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.