ADVERTISEMENT

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಡಾ.ನಿಕಿನ್ ಶೆಟ್ಟಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 13:38 IST
Last Updated 1 ಮಾರ್ಚ್ 2025, 13:38 IST
ಡಾ.ನಿಕಿನ್ ಶೆಟ್ಟಿ
ಡಾ.ನಿಕಿನ್ ಶೆಟ್ಟಿ   

ಕುಂದಾಪುರ: ವಿಜಯಪುರದಲ್ಲಿ ನಡೆದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 31ನೇ ಸಮ್ಮೇಳನ ಅನುಭಾವ–25ರಲ್ಲಿ ಜಿಲ್ಲೆಯ ತಜ್ಞ ವೈದ್ಯ ಡಾ.ನಿಕಿನ್ ಶೆಟ್ಟಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 54 ವರ್ಷಗಳ ಇತಿಹಾಸದಲ್ಲಿ ಪ್ರಥಮ ಬಾರಿಗೆ ಕರಾವಳಿ ಭಾಗದ ಜಿಲ್ಲೆಯ ವೈದ್ಯಾಧಿಕಾರಿಯೊಬ್ಬರು ಬಹುಮತದಿಂದ ಆಯ್ಕೆಯಾಗಿದ್ದಾರೆ.

ಡಾ.ನಿಕಿನ್ ಶೆಟ್ಟಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಉಡುಪಿ ಜಿಲ್ಲಾ ಸಂಘದ ಜವಾಬ್ದಾರಿ ಹೆಚ್ಚಾಗಿದೆ ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ನಾಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.