ADVERTISEMENT

ಮಾದಕ ದ್ರವ್ಯ ಪ್ರಕರಣ: ಬಂಧನ ಆದೇಶ ಎತ್ತಿಹಿಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 7:09 IST
Last Updated 23 ಆಗಸ್ಟ್ 2025, 7:09 IST
ಕೃಷ್ಣ
ಕೃಷ್ಣ   

ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಬ್ರಹ್ಮಾವರದ ಉಪ್ಪೂರು ಗ್ರಾಮದ ಕೃಷ್ಣ ಆಚಾರಿ ಅಲಿಯಾಸ್‌ ಕೃಷ್ಣ ಜಲಗಾರನ (43) ಬಂಧನ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಈತನ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಜರುಗಿಸಲು ಸೆನ್‌ ಅಪರಾಧ ಠಾಣೆಯ ಇನ್‌ಸ್ಪೆಕ್ಟರ್‌ ಮುಖಾಂತರ ಬಂದ ವರದಿಯನ್ನು ಪೊಲೀಸ್‌ ವರಿಷ್ಠಾಧಿಕಾರಿ ಅವರು ಮಂಗಳೂರಿನ ಪಶ್ಚಿಮ ವಲಯ ಐಜಿಪಿಗೆ ಸಲ್ಲಿಸಿದ್ದು, ಅವರು ಆತನ ವಿರುದ್ಧ ದಾಖಲಾದ ಪ್ರಕರಣಗಳನ್ನು ಪರಿಶೀಲಿಸಿ ಮೇ 19 ರಂದು ಬಂಧನ ಆದೇಶ ಹೊರಡಿಸಿದ್ದರು.

ಬಳಿಕ ಬಂಧಿತನನ್ನು ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಬಂಧನ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್‌ ಪೀಠವು ಪಶ್ಚಿಮ ವಲಯ ಐಜಿಪಿ ಅವರ ಆದೇಶವನ್ನು ಎತ್ತಿ ಹಿಡಿದಿದೆ. ಆರೋಪಿಗೆ ಒಂದು ವರ್ಷದ ವರೆಗೆ ಬಂಧನ ಆದೇಶ ಹೊರಡಿಸಲಾಗಿತ್ತು.

ADVERTISEMENT

ಆರೋಪಿಯ ವಿರುದ್ಧ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, ಎರಡು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.