ADVERTISEMENT

ಉಡುಪಿ: ₹ 14,70 ಲಕ್ಷ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶ

462 ಎಂಡಿಎಂಎ ಮಾತ್ರೆ, 14 ಗ್ರಾಂ ಹೈಡ್ರೋವೀಡ್ ಪತ್ತೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 1:43 IST
Last Updated 20 ನವೆಂಬರ್ 2020, 1:43 IST
ಉಡುಪಿಯಲ್ಲಿ ಗುರುವಾರ ಮಾದಕ ವಸ್ತು ಮಾರಾಟ ಜಾಲದ ಮೇಲೆ ದಾಳಿ ನಡೆಸಿದ ಪೊಲೀಸರು 244 ಗ್ರಾಂನ 462 ಎಂಡಿಎಂಎ ಮಾತ್ರೆಗಳು ಹಾಗೂ 14 ಗ್ರಾಂ ವಿದೇಶಿ ಹೈಡ್ರೋವೀಡ್ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಉಡುಪಿಯಲ್ಲಿ ಗುರುವಾರ ಮಾದಕ ವಸ್ತು ಮಾರಾಟ ಜಾಲದ ಮೇಲೆ ದಾಳಿ ನಡೆಸಿದ ಪೊಲೀಸರು 244 ಗ್ರಾಂನ 462 ಎಂಡಿಎಂಎ ಮಾತ್ರೆಗಳು ಹಾಗೂ 14 ಗ್ರಾಂ ವಿದೇಶಿ ಹೈಡ್ರೋವೀಡ್ ಗಾಂಜಾ ವಶಪಡಿಸಿಕೊಂಡಿದ್ದಾರೆ.   

ಉಡುಪಿ: ನಗರದಲ್ಲಿ ಗುರುವಾರ ಮಾದಕ ವಸ್ತು ಮಾರಾಟ ಜಾಲದ ವಿರುದ್ಧನಡೆದ ಕಾರ್ಯಾಚರಣೆಯಲ್ಲಿ 244 ಗ್ರಾಂನ 462 ಎಂಡಿಎಂಎ ಮಾತ್ರೆಗಳು ಹಾಗೂ 14 ಗ್ರಾಂ ವಿದೇಶಿ ಹೈಡ್ರೋವೀಡ್ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ₹ 14,70 ಲಕ್ಷ ಎಂದು ಅಂದಾಜಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಹಿಂದೆ ದಾಖಲಾಗಿದ್ದ ಗಾಂಜಾ ಪ್ರಕರಣಗಳ ತನಿಖೆಯ ವೇಳೆ ಸಿಕ್ಕ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. 2 ತಿಂಗಳಲ್ಲಿ ಐದನೇ ಬಾರಿ ವಿದೇಶದಿಂದ ಆಮದಾದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ವಿಷ್ಣುವರ್ಧನ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಕಾರ್ಕಳ ಡಿವೈಎಸ್‌ಪಿ ಭರತ್ ಎಸ್.ರೆಡ್ಡಿ, ಮಣಿಪಾಲ ಇನ್‌ಸ್ಪೆಕ್ಟರ್ ಮಂಜುನಾಥ್ ಎಂ.ಗೌಡ ನೇತೃತ್ವದ ತಂಡದಲ್ಲಿ ಸಹಾಯಕ ಡ್ರಗ್ ಕಂಟ್ರೋಲರ್ ನಾಗರಾಜ್, ಅಧಿಕಾರಿಗಳಾದ ಶಂಕರ್, ಪ್ರದೀಪ್ ಕುಮಾರ್, ಮಣಿಪಾಲ ಠಾಣೆಯ ಆದರ್ಶ, ದಯಾಕರ್ ಪ್ರಸಾದ್, ಶುಭಾ, ಆನಂದಯ್ಯ, ಸುದೀಪ್, ಜಗದೀಶ್ ಕಾರ್ಯಾಚರಣೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.