ADVERTISEMENT

ಶಿಕ್ಷಣದಲ್ಲಿ ಆರ್‌ಎಸ್‌ಎಸ್‌: ದಸಂಸ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 14:12 IST
Last Updated 3 ಜುಲೈ 2022, 14:12 IST
ಭಾನುವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಜನಪರ ಸಂಘಟನೆಗಳಿಂದ ಪಠ್ಯಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
ಭಾನುವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಜನಪರ ಸಂಘಟನೆಗಳಿಂದ ಪಠ್ಯಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.   

ಉಡುಪಿ: ಸಂವಿಧಾನದ ಆತ್ಮವನ್ನು ರಕ್ಷಿಸಬೇಕಾದ ರಾಜ್ಯ ಸರ್ಕಾರ ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದು ಶಿಕ್ಷಣವನ್ನು ಆರ್‌ಎಸ್ಸಿಸ್ಸೀಕರಣಗೊಳಿಸುತ್ತಿದೆ ಎಂದು ಚಿಂತಕ ಕೆ.ಫಣಿರಾಜ್ ಟೀಕಿಸಿದರು.

ಭಾನುವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಜನಪರ ಸಂಘಟನೆಗಳಿಂದ ಪಠ್ಯಕ್ರಮ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಪ್ರತಿಭಟನೆಗೂ ಮುನ್ನ ಶಿಕ್ಷಣ ಸಚಿವ ನಾಗೇಶ್ ಹಾಗೂ ರೋಹಿತ್ ಚಕ್ರತೀರ್ಥರ ಅಣಕು ಶವಯಾತ್ರೆ ನಡೆಸಿದ ಪ್ರತಿಭಟನಾಕಾರರು ಬಳಿಕ ಪ್ರತಿಕೃತಿ ದಹಿಸಿದರು.

ADVERTISEMENT

ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್‌, ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಅಜೀಜ್, ಮುಖಂಡರಾದ ಶ್ಯಾಮರಾಜ್ ಬಿರ್ತಿ, ಮಂಜುನಾಥ್ ಬಾಳಕುದ್ರು, ಪರಮೇಶ್ವರ ಉಪ್ಪೂರು, ಶಿವಾನಂದ ಮೂಡಬೆಟ್ಟು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.