ADVERTISEMENT

ಬ್ರಹ್ಮಾವರ | 'ಶಿಕ್ಷಣದಿಂದ ಸರ್ವಾಂಗೀಣ ಅಭಿವೃದ್ಧಿ'

ಕೋಟ ಮಣೂರು ಪಡುಕರೆ ವಾರ್ಷಿಕೋತ್ಸವ ವಾರಿಧಿ ಸಂಭ್ರಮದಲ್ಲಿ ಆನಂದ ಸಿ. ಕುಂದರ್‌

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 6:10 IST
Last Updated 15 ಡಿಸೆಂಬರ್ 2025, 6:10 IST
ಮಣೂರು ಪಡುಕರೆ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಮಣೂರು ಪಡುಕರೆ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಕೋಟ(ಬ್ರಹ್ಮಾವರ): ‘ಶಿಕ್ಷಣ ಜ್ಞಾನ ಗಳಿಕೆಯೊಂದಿಗೆ ವಿದ್ಯಾರ್ಥಿಯ ಸರ್ವಾಂಗೀಣ ವ್ಯಕ್ತಿತ್ವ ವಿಕಸನದ ಮೂಲ ನೆಲೆ’ ಎಂದು ಮಣೂರು ಪಡುಕರೆ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ ಕುಂದರ್ ಹೇಳಿದರು.

ಕೋಟ ಮಣೂರು ಪಡುಕರೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳು ಕಾಲ ನಡೆದ ವಾರ್ಷಿಕೋತ್ಸವ ‘ವಾರಿಧಿ ಸನ್ಮಾನ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣಾ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಗುರು–ಹಿರಿಯರಲ್ಲಿ ಪ್ರೀತಿ, ಗೌರವದ ಭಾವನೆ, ಮಾನವೀಯ ಮೌಲ್ಯ ಅಗತ್ಯ ಎಂದರು.

ADVERTISEMENT

ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಮಕ್ಕಳ ವಿಕಸಿತ ಬದುಕಿನಲ್ಲಿ ಶಿಕ್ಷಣ ಅಗತ್ಯ ಎಂದರು.

ಇದೇ ಸಂದರ್ಭ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ಲೋಕೇಶ್‌ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ವಿಭಾಗದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಡಯೆಟ್ ಪ್ರಾಂಶುಪಾಲ ಅಶೋಕ ಕಾಮತ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ ಕುಂದರ್, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಪ್ರೌಢಶಾಲಾ ವಿಭಾಗದ ಅಧ್ಯಕ್ಷ ನಾಗರಾಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಪ್ರಾಥಮಿಕ ವಿಭಾಗ ಅಧ್ಯಕ್ಷ ವಿನಯ ಕುಮಾರ್, ಜಯರಾಮ ಶೆಟ್ಟಿ ಇದ್ದರು.

ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ಡೆನ್ನಿಸ್ ಬಾಂಜಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ವಿವೇಕಾನಂದ ವಿ. ಗಾಂವಕಾರ ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಮಂಜುನಾಥ ಹೊಳ್ಳ ವಂದಿಸಿದರು. ಉಪನ್ಯಾಸಕಿ ಮಮತಾ ನಿರೂಪಿಸಿದರು. ಡಾ. ಸಹನಾ, ಸತ್ಯನಾರಾಯಣ, ರತ್ನ, ರೂಪ, ರಾಜು, ಚಂದ್ರಶೇಖರ ಸಹಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.