ADVERTISEMENT

ಶಿಕ್ಷಕ ಸ್ನೇಹಿ ವರ್ಗಾವಣೆ ಜಾರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 11:38 IST
Last Updated 14 ಜನವರಿ 2020, 11:38 IST
ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಸೋಮವಾರ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದರು.
ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಸೋಮವಾರ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದರು.   

ಕೋಟ (ಬ್ರಹ್ಮಾವರ): ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಸೋಮವಾರ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹೊಸ ಕಾಯ್ದೆಯಿಂದ ವರ್ಗಾವಣೆ ಬಯಸುವ ಶಿಕ್ಷಕರಷ್ಟೇ ವರ್ಗಾವಣೆ ಮಾಡಿಕೊಳ್ಳಬಹುದು. ಈಗಾಗಲೇ ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡ ಶಿಕ್ಷಕರುತಾವು ಬಯಸುವ ಸ್ಥಳಕ್ಕೆ ವರ್ಗಾವಣೆ ಮಾಡಿಕೊಳ್ಳಬಹುದಾಗಿದೆ. ಪ್ರಾಥಮಿಕಶಾಲಾ ಶಿಕ್ಷಕರನ್ನು ಸ್ವಂತ ತಾಲ್ಲೂಕು ಮತ್ತು ಪ್ರೌಢಶಾಲಾ ಶಿಕ್ಷಕರನ್ನು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡ
ಲಾಗುವುದು’ ಎಂದು ತಿಳಿಸಿದರು.

ADVERTISEMENT

ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಉತ್ತರಿಸಿದ ಅವರು, ‘ಮಾರ್ಚ್ 31ರೊಳಗೆ ವಿದ್ಯಾರ್ಥಿ
ಗಳು, ಶಿಕ್ಷಕರು ಮತ್ತು ಪೋಷಕರ ಸಮಸ್ಯೆಗಳಿಗೆ ಸ್ಪಂದಿಸಲು ಟೋಲ್ ಫ್ರೀ ಸಹಾಯವಾಣಿಯನ್ನು ಆರಂಭಿಸ
ಲಾಗುವುದು. ಇದರಿಂದ ಶೈಕ್ಷಣಿಕ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿದೆ’ ಎಂದರು.

ಸರ್ಕಾರಿ ಶಾಲೆಯಲ್ಲಿರುವ ಎಸ್‌ಡಿಎಂಸಿ ಬಗ್ಗೆ ಮಾತನಾಡಿದ ಅವರು, ‘ಶಾಲೆಯ ಅಭಿವೃದ್ಧಿಗೆ ಅನುದಾನ ನೀಡಿದ ದಾನಿಗಳು, ಶಿಕ್ಷಣ ಪ್ರೇಮಿಗಳನ್ನು ಎಸ್‌ಡಿಎಂಸಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗುವುದು. ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರತಿಯೊಂದು ಸರ್ಕಾರಿ ಶಾಲೆಯಲ್ಲೂ ಎಲ್.ಕೆ.ಜಿ, ಯು.ಕೆ.ಜಿಯನ್ನು ಪ್ರಾರಂಭಿಸುವ ಮತ್ತು ಗುರು ಸ್ಪಂದನ ಕಾರ್ಯಕ್ರಮಕ್ಕೆ ಪುನಶ್ಚೇತನ ನೀಡಲಾಗುವುದು. ಪಿಂಚಣಿ ಸಮಸ್ಯೆಗೆ ಪರಿಹಾರ ಒದಗಿಸಲು ಸಭೆ ನಡೆಸಿ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.

ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ತರಬೇತಿ, ಬಿಸಿಯೂಟ ತಯಾರಿಸುವವರಿಗೆ ಸಂಬಳ ಹೆಚ್ಚಳ,
ಪ್ರತಿಭಾ ಕಾರಂಜಿಗೆ ನೀಡುವಂತೆ ಕ್ರೀಡಾಕೂಟಗಳಿಗೂ ಅನುದಾನ ನೀಡುವ ಬಗ್ಗೆ ಚಿಂತನೆ ನಡೆಸಲಾ
ಗುವುದು ಎಂದರು.

ಇದೇ ಸಂದರ್ಭ ಶಿಕ್ಷಕರ ಮನವಿಗಳನ್ನು ಸಚಿವರು ಸ್ವೀಕರಿಸಿ, ಪರಿಹಾರದ ಭರವಸೆ ನೀಡಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಡಿಡಿಪಿಐಶೇಷಶಯನ, ಡಿಡಿಪಿಯು ಮಾರುತಿ, ಉದ್ಯಮಿ ಆನಂದ ಸಿ.ಕುಂದರ್, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಘು ತಿಂಗಳಾಯ ಉಪಸ್ಥಿತರಿದ್ದರು. ಅಧ್ಯಾಪಕ ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.