ADVERTISEMENT

ಹೆಬ್ರಿಯಲ್ಲಿ ಶಿಕ್ಷಣ ಕ್ರಾಂತಿ: ಗಣೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 5:01 IST
Last Updated 24 ಸೆಪ್ಟೆಂಬರ್ 2022, 5:01 IST
ಹೆಬ್ರಿ ಎಸ್ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪದವಿಪೂರ್ವ ವಿಭಾಗದ ತಾಲ್ಲೂಕು ಮಟ್ಟದ ವಾಲಿಬಾಲ್ ಟೂರ್ನಿಯನ್ನು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಕುಮಾರ್ ಉದ್ಘಾಟಿಸಿದರು.
ಹೆಬ್ರಿ ಎಸ್ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪದವಿಪೂರ್ವ ವಿಭಾಗದ ತಾಲ್ಲೂಕು ಮಟ್ಟದ ವಾಲಿಬಾಲ್ ಟೂರ್ನಿಯನ್ನು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಕುಮಾರ್ ಉದ್ಘಾಟಿಸಿದರು.   

ಹೆಬ್ರಿ: ಎರಡೂವರೆ ದಶಕಗಳ ಹಿಂದೆ ಹೆಬ್ರಿಯಂತಹ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ತೆರೆದು ಶಿಕ್ಷಣ ಕ್ರಾಂತಿಗೆ ಎಸ್ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ ಅವರು ಕಾರಣರಾಗಿದ್ದಾರೆ ಎಂದು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ್ ಕುಮಾರ್ ಹೇಳಿದರು.

ಎಸ್ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪದವಿಪೂರ್ವ ವಿಭಾಗದ ತಾಲ್ಲೂಕು ಮಟ್ಟದ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್ ನಾಗರಾಜ್ ಶೆಟ್ಟಿ ಮಾತನಾಡಿ ಸತತ ಅಭ್ಯಾಸ ಮತ್ತು ನಿರಂತರ ಪರಿಶ್ರಮದಿಂದ ಕ್ರೀಡೆಯಲ್ಲಿ ಗೆಲುವು ಕಾಣಲು ಸಾಧ್ಯ ಎಂದರು.

ADVERTISEMENT

ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ, ಪ್ರಾಂಶುಪಾಲ ಪ್ರಶಾಂತ್ ಉಪಸ್ಥಿತರಿದ್ದರು. ಉಪನ್ಯಾಸಕ ದೀಪಕ್ ಎನ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಮಧು ಶೇಖರ ಸ್ವಾಗತಿಸಿದರು. ಉಪನ್ಯಾಸಕ ಹರಿಪ್ರಸಾದ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.