
ಬ್ರಹ್ಮಾವರ: ‘ಕೋಟತಟ್ಟು ಗ್ರಾಮ ಪಂಚಾಯಿತಿಯ ನೇತೃತ್ವದಲ್ಲಿ ಗ್ರಾಮದ 8 ಕೊರಗ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುತ್ತಿರುವ ಕಾರ್ಯ ದೇವರು ಮೆಚ್ಚುವ ಕೆಲಸ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಈ ಸಮುದಾಯವನ್ನು ಮೇಲಕ್ಕೆ ಎತ್ತುವ ಕೆಲಸ ಇಲ್ಲಿಂದ ಪ್ರಾರಂಭವಾಗಲಿ’ ಎಂದು ಉದ್ಯಮಿ ಸುರೇಶ ಕಾಂಚನ ಹೇಳಿದರು.
ಕೋಟತಟ್ಟು ಚಿಟ್ಟಿಬೆಟ್ಟು ಕೊರಗ ಕಾಲೊನಿಯಲ್ಲಿ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ನಿರ್ಮಾಣವಾಗುತ್ತಿರುವ ಮನೆ ಕಾಮಗಾರಿಗೆ ₹1 ಲಕ್ಷ ದೇಣಿಗೆ ನೀಡಿ ಅವರು ಮಾತನಾಡಿದರು.
ಎಂಟು ಮನೆಗಳನ್ನು ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಸರ್ಕಾರದಿಂದ ಪ್ರತಿ ಮನೆಗೆ ತಲಾ ₹3.75 ಲಕ್ಷ ಅನುದಾನ ಸಿಗಲಿದ್ದು, ದಾನಿಗಳಿಂದ ನೆರವು ಪಡೆಯಲಾಗುತ್ತಿದೆ.
ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್, ಉಪಾಧ್ಯಕ್ಷೆ ಸರಸ್ವತಿ, ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಮೋದ ಹಂದೆ, ಪ್ರಕಾಶ ಹಂದಟ್ಟು, ರಾಬರ್ಟ್ ರೊಡ್ರಿಗಸ್, ಜ್ಯೋತಿ, ಸೀತಾ, ಬಾರಿಕೆರೆ ಯುವಕ ಮಂಡಲದ ಅಧ್ಯಕ್ಷ ರವಿ, ಕಾರ್ಯದರ್ಶಿ ಪವನ್ ಕುಂದರ್ ಹಾಗೂ ಪದಾಧಿಕಾರಿಗಳು ಹಾಗೂ ಕೊರಗ ಕಾಲೊನಿಯ ಫಲಾನುಭವಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.